ಸುದ್ದಿ

ರಾಜ್ಯ ಸರ್ಕಾರದಿಂದ ಮೂವರು ಐಎಎಸ್‌ ಅಧಿಕಾರಿಗಳ ದಿಢೀರ್ ವರ್ಗಾವಣೆ.

ರಾಜ್ಯ ಸರ್ಕಾರ ಆಗಾಗ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ದಿಢೀರ್ ಮೂವರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹಾಗಾದ್ರೆ ಯಾರನ್ನು ಎಲ್ಲಿಗೆ, ಯಾವ ಹುದ್ದೆಗೆ ವರ್ಗಾಹಿಸಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಹೌದು.. ರಾಜ್ಯ ಸರ್ಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ (ಸೆಪ್ಟೆಂಬರ್ 26) ಆದೇಶ ಹೊರಡಿಸಿದೆ. ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್.ಮಂಜುಳಾ ಅವರನ್ನು ಇಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜಾವಾಬ್ದಾರಿಯನ್ನು ವಹಿಸಲಾಗಿದೆ.

ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಜಂಟಿ ಕಾರ್ಯದರ್ಶಿ ಗೋವಿಂದ ರೆಡ್ಡಿಯವನ್ನು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಇಲಾಖೆಯ ಆಯುಕ್ತರನ್ನಾಗಿ ಹಾಗೂ ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಎಸ್.ಪೂವಿತಾ ಅವರನ್ನು ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.

ರಾಜ್ಯ ಸರ್ಕಾರದಿಂದ ಮೇಜರ್ ಸರ್ಜರಿ: ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಬರೋಬ್ಬರಿ 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿತ್ತು.

ಯಾರು, ಎಲ್ಲಿಗೆ ವರ್ಗಾವಣೆ?

  • ಮೋಹನ್ ರಾಜ್‌ ಕೆ.ಪಿ: ವ್ಯವಸ್ಥಾಪಕ ನಿರ್ದೇಶಕರು, ಕೃಷ್ಣಾ ಜಲ ಭಾಗ್ಯ ನಿಗಮ ಇವರಿಗೆ ಆಯುಕ್ತರು, ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್‌ ನಿರ್ಮಾಣ.

ಶಿವನಗೌಡ ಪಾಟೀಲ್: ಆಯುಕ್ತರು, ಕೃಷಿ ಇಲಾಖೆ ಇವರಿಗೆ ತೋಟಗಾರಿಕೆ ಹಾಗೂ ರಾಷ್ಟ್ರೀಯ ತೋಟಗಾರಿಕಾ ಮಿಷನ್‌ನ ನಿರ್ದೇಶಕ.

  • ಡಾ.ಗೋಪಾಲ ಕೃಷ್ಣ ಎಚ್‌.ಎನ್‌: ಆಯುಕ್ತರು, ಕಾರ್ಮಿಕ ಇಲಾಖೆ ಇವರಿಗೆ ಆಯುಕ್ತರು, ಇಎಸ್ಐಎಸ್ ಕಾರ್ಮಿಕ ಇಲಾಖೆ.
  • ಡಾ.ರಾಜೇಂದ್ರ ಕೆ.ವಿ: ಆಯುಕ್ತರು, ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ಇವರಿಗೆ ವ್ಯವಸ್ಥಾಪಕ ನಿರ್ದೇಶಕರು, ಪ್ರವಾಸೋದ್ಯ, ಅಭಿವೃದ್ಧಿ ನಿಗಮ.

ಮುಲ್ಲೈ ಮುಗಿಲನ್: ಆಯುಕ್ತರು, ಮುದ್ರಾಂಕ ಮತ್ತು ನೋಂದಣಿ ಇಲಾಖೆ, ಇವರಿಗೆ ಕಂದಾಯ ಆಯುಕ್ತರು (ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಮತ್ತು ಸಾಮಾಜಿಕ ಭದ್ರತೆ)

  • ವೆಂಕಟರಾಜ: ಜಿಲ್ಲಾಧಿಕಾರಿ ಕೊಡಗು, ಇವರಿಗೆ ಪ್ರಾದೇಶಿಕ ಆಯುಕ್ತರು ಮೈಸೂರು ವಲಯ.
  • ನಳಿನ್ ಅತುಲ್: ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಇವರಿಗೆ ಹೆಚ್ಚುವರಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಕಲಬುರಗಿ.
  • ಲೊಖಂಡೆ ಸ್ನೇಹಲ್ ಸುಧಾಕರ್: ಹೆಚ್ಚುವರಿ ಆಯುಕ್ತರು, ಬೆಂಗಳೂರು ಪೂರ್ವ ನಗರ ಪಾಲಿಕೆ ಇವರಿಗೆ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ವಿದ್ಯುತ್ ಕಾರ್ಖನೆ.

ಭರತ್ ಎಸ್‌: ನಿರ್ದೇಶಕರು, ಪಿಯು ಶಿಕ್ಷಣ ಇಲಾಖೆ ಇವರಿಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಹುದ್ದೆ.

  • ರಾಹುಲ್‌ ಶರಣಪ್ಪ ಸಂಕನೂರು: ಹೆಚ್ಚುವರಿ ಆಯುಕ್ತರು, ಬೆಂಗಳೂರು ಕೇಂದ್ರ ನಗರ ಪಾಲಿಕೆ ಇವರಿಗೆ ಕೆಪಿಎಸ್‌ಸಿಯ ಪರೀಕ್ಷಾ ಜಂಟಿ ನಿರ್ದೇಶಕ ಹುದ್ದೆ.
  • ದಲ್ಜೀತ್ ಕುಮಾರ್: ಉಪ ಕಾರ್ಯದರ್ಶಿ, ಐಟಿ-ಬಿಟಿ, ಇವರಿಗೆ ಪ್ರಭಾರವಾಗಿ ನಿರ್ದೇಶಕರು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ.

Related Articles

Leave a Reply

Your email address will not be published. Required fields are marked *

Back to top button