ಬೆಂಗಳೂರು ಹೊರವಲಯ ಪ್ರದೇಶಗಳನ್ನ GBA ಸೇರ್ಪಡೆಗೆ ಸಮೀಕ್ಷೆ ಆರಂಭಿಸಿ: ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಸೂಚನೆ.
Date -24/10/2025. Bangalore.
ಬೆಂಗಳೂರು ನಗರ ಜಿಲ್ಲೆಯ 12 ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಭವಿಷ್ಯದಲ್ಲಿ ಬೆಂಗಳೂರು ಬೆಳೆಯಲಿದೆ. ಬಿಎಂಆರ್ಡಿಎ ವ್ಯಾಪ್ತಿಯ ಪ್ರದೇಶಗಳು ಬೆಂಗಳೂರು ನಗರದ ಭಾಗವಾಗಲಿವೆ. ರಸ್ತೆ ಅಗಲೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸೂಕ್ತ ಯೋಜನೆ ರೂಪಿಸಲು ಸೂಚಿಸಲಾಗಿದೆ. ಬೆಂಗಳೂರು ಸುತ್ತಲಿನ ಗಡಿ ಭಾಗದ ಎಲ್ಲ 12 ಸ್ಥಳೀಯ ಸಂಸ್ಥೆಗಳ ಸೇರ್ಪಡೆ ಬಗ್ಗೆ ಯೋಜಿಸಲಾಗುತ್ತಿದೆ.
ಬೆಂಗಳೂರು : “ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಬೇಕಾದ ಬೆಂಗಳೂರು ಹೊರವಲಯದ ಪ್ರದೇಶಗಳ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆವರು ತಿಳಿಸಿದರು.
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಶುಕ್ರವಾರ ಮಾತನಾಡಿದರು.
ಬೆಂಗಳೂರು ನಗರ ಜಿಲ್ಲೆಯ 12 ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ನಡೆಸಲಾಯಿತು. ಭವಿಷ್ಯದಲ್ಲಿ ಬೆಂಗಳೂರು ಬೆಳೆಯಲಿದೆ. ಬಿಎಂಆರ್ಡಿಎ ವ್ಯಾಪ್ತಿಯ ಪ್ರದೇಶಗಳು ಇಂದಲ್ಲ ನಾಳೆ ಬೆಂಗಳೂರು ನಗರದ ಭಾಗವಾಗಲಿವೆ” ಎಂದರು.
“ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಎಂದು ಸೂಚನೆ” ನಿನ್ನೆ ನಗರ ಪ್ರದಕ್ಷಿಣೆ ಮಾಡಿ ಅವಲೋಕನ ನಡೆಸಿದೆ. ಈಗಿನಿಂದಲೇ ರಸ್ತೆ ಅಗಲೀಕರಣ ಮತ್ತಿತರ ಮೂಲಸೌಕರ್ಯಗಳ ಅಭಿವೃದ್ಧಿ ಮಾಡಬೇಕಿದೆ. ಇದಕ್ಕೆ ಸೂಕ್ತ ಯೋಜನೆ ಮಾಡಬೇಕಿದೆ. ಸಿಎಂಸಿ, ಪಟ್ಟಣ ಪಂಚಾಯತಿ ಸೇರಿದಂತೆ ಒಂದಷ್ಟು ಪ್ರದೇಶಗಳಲ್ಲಿ ರಸ್ತೆಗಳು ಕಿರಿದಾಗಿವೆ. ಭವಿಷ್ಯದಲ್ಲಿ ಕಷ್ಟಪಡುವ ಬದಲು ಈಗಲೇ ಪಿಡ್ಬ್ಲೂಡಿ, ನಗರ ಯೋಜನೆ ಇಲಾಖೆಯವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಎಂದು ಸೂಚನೆ ನೀಡಿದ್ದೇನೆ” ಎಂದು ಮಾಹಿತಿ ನೀಡಿದರು. ಬೆಂಗಳೂರು ದಕ್ಷಿಣದಲ್ಲಿ ಮಾತ್ರ ಹೊಸ ಪ್ರದೇಶಗಳನ್ನು ಸೇರಿಸಿಕೊಳ್ಳಲಾಗುವುದೇ ಎಂದು ಕೇಳಿದಾಗ, “ಬೆಂಗಳೂರು ಸುತ್ತಲಿನ ಗಡಿ ಭಾಗದ ಎಲ್ಲ 12 ಸ್ಥಳೀಯ ಸಂಸ್ಥೆಗಳ ಸೇರ್ಪಡೆ ಬಗ್ಗೆ ಯೋಜಿಸಲಾಗುತ್ತಿದೆ. ಮೊದಲು ಅಧಿಕಾರಿಗಳು ವರದಿ ನೀಡಲಿ. ಅದರ ಜೊತೆಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು, ಶಾಸಕರು, ಸಂಸದರ ಜೊತೆ ಚರ್ಚೆ ಮಾಡಲು ತಿಳಿಸಿದ್ದೇನೆ” ಎಂದರು.




