ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷರಾದ ಸನ್ಮಾನ್ಯ C.M.ಧನಂಜಯ ಅಧ್ಯಕ್ಷತೆಯಲ್ಲಿ ನಡೆಯುವ ಬೃಹತ್ ಪ್ರತಿಭಟನನೆ

DATE-09/10/2025, BANGALORE.
ಭಾರತದ ಸರ್ವೋಚ್ಚ ನ್ಯಾಯಾಲಯದ ಘನತೆವೆತ್ತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ರವರ ಮೇಲೆ ರಾಕೇಶ್ ಕಿಶೋರ್ ಎಂಬ ಮನುವಾದಿ ವಕೀಲನೊಬ್ಬ ತನ್ನ ಶೂ ಎಸೆದ ದುಷ್ಕೃತ್ಯವನ್ನು ಖಂಡಿಸಿ ದಿನಾಂಕ:10/10/2025 ರಂದು ಶುಕ್ರವಾರ ಮಧ್ಯಾಹ್ನ ಸಮಯ 02:00 ಕ್ಕೆ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಪ್ರಾದೇಶಿಕ ಕಚೇರಿಯಲ್ಲಿ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷರಾದ ಸನ್ಮಾನ್ಯ C.M.ಧನಂಜಯ ಸಾಹೇಬರ ಅಧ್ಯಕ್ಷತೆಯಲ್ಲಿ ನಡೆಯುವ ಬೃಹತ್ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ರಮೇಶ್ ಬಾಬು ಸಾಹೇಬರು, ಹಾಗೂ ಮಾನ್ಯ ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಸಾಹೇಬರು ಭಾಗವಹಿಸುತ್ತಿದ್ದು, ಕಾನೂನು ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗಕ್ಕೆ ನೂತನವಾಗಿ ನೇಮಕಗೊಂಡ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ವಕೀಲ ಮಿತ್ರರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಈ ಬೃಹತ್ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು KPCC ಮಾಧ್ಯಮ ಪ್ರಕಟಣೆ ಮೂಲಕ ವಿನಂತಿಸಿಕೊಂಡಿತು.



