Date 21/10/2024, ಮಂಗಳವಾರ.
ಬೆಂಗಳೂರು : ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಅವಸ್ಥೆಯ ಬಗ್ಗೆ ವ್ಯಾಪಕ ಸಾರ್ವಜನಿಕ ಆಕ್ರೋಶ ವ್ಯಕ್ತವಾಗುತ್ತಿದೆ. ಹೀಗಾಗಿ ಇನ್ನೊಂದು ವಾರದಲ್ಲಿ ಬೆಂಗಳೂರಿನಲ್ಲಿರುವ ರಸ್ತೆ ಗುಂಡಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಡೆಡ್ ಲೈನ್ ನೀಡಿದ್ದಾರೆ. ಇಂದು ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಗುದ್ದಲಿ ಪೂಜೆ ನೆರವೇರಿಸಿದ ವೇಳೆ, ಇದೇ ವೇದಿಕೆಯಲ್ಲಿ ಒಂದು ವಾರದಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಟಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗೆ ಸೂಚನೆ ನೀಡಿದ್ದಾರೆ. ನಮ್ಮಸರ್ಕಾರ ಬೆಂಗಳೂರಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಔಟರ್ ರಿಂಗ್ ರಸ್ತೆ, ಸುರಂಗ ಮಾರ್ಗ, ಫೈ ಓವರ್, ಡಬಲ್ ಡೆಕ್ಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ ₹1,20,000 ಕೋಟಿ ನೀಡುತ್ತಿದ್ದೇವೆ. ಹೀಗಾಗಿ ಸದ್ಯದಲ್ಲೇ ರಸ್ತೆ ಗುಂಡಿಗಳು ಮಾಯವಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.




