ಸುದ್ದಿ

ಬೆಂಗಳೂರು ಹೆಬ್ಬಾಳ ಪೊಲೀಸರ ಕಾರ್ಯಾಚರಣೆ, ಸರ ಕಳವು ಮತ್ತು ದ್ವಿಚಕ್ರ ವಾಹನ ಕಳ್ಳನ ಬಂಧನ.

ದಿನಾಂಕ 05/11/2025,

ಸರ ಅಪಹರಣ ಮತ್ತು ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 4 ದ್ವಿ-ಚಕ್ರ ವಾಹನಗಳ ವಶ, ಮೌಲ್ಯ 2 ಲಕ್ಷ.ಹೆಬ್ಬಾಳ ಪೊಲೀಸ್ ಠಾಣಾ ಸರಹದ್ದಿನ ಸುಲ್ತಾನಪಾಳ್ಯದಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:08/10/2025 ರಂದು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರ್ಯಾದುದಾರರು ದಿನಾಂಕ:08/10/2025 ರಂದು ಸಂಜೆ ಹೆಬ್ಬಾಳದ ಮನೋರಾಯನಪಾಳ್ಯದ ಅಪಾರ್ಟ್ ಮೆಂಟ್ ವೊಂದರ ಬಳಿ ನಡೆದುಕೊಂಡು ಹೋಗುತ್ತಿರುವಾಗ ದ್ವಿ-ಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಪಿರ್ಯಾದುದಾರರ ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಸರ ಅಪಹರಣ ಪ್ರಕರಣ ದಾಖಲಾಗಿರುತ್ತದೆ.ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು ತಲಘಟ್ಟಪುರ ಪೊಲೀಸ್ ಠಾಣೆಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಓರ್ವ ವ್ಯಕ್ತಿಯನ್ನು ದಿನಾಂಕ:28.10.2025 ರಂದು 04 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.ಪೊಲೀಸ್ ಅಭಿರಕ್ಷೆಗೆ ಪಡೆದ ವ್ಯಕ್ತಿಯನ್ನು ಸುದೀರ್ಘವಾಗಿ ವಿಚಾರಿಸಲಾಗಿ, ಈ ಪ್ರಕರಣದಲ್ಲಿ ಸರ ಅಪಹರಣ ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಮತ್ತು ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ಸರಹದ್ದಿನಲ್ಲಿ ದ್ವಿ-ಚಕ್ರ ವಾಹನ ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ. ಹಾಗೂ ವಿ.ನಾಗೇನಹಳ್ಳಿ, ಪಿಳಿಕಮ್ಮ ದೇವಸ್ಥಾನ ಮುಂಭಾಗದ ಖಾಲಿ ಜಾಗದಲ್ಲಿ 04 ದ್ವಿ-ಚಕ್ರ ವಾಹನಗಳನ್ನು ನಿಲ್ಲಿಸಿರುವುದಾಗಿ ಮಾಹಿತಿಯನ್ನು ನೀಡಿರುತ್ತಾನೆ.ದಿನಾಂಕ:30/10/2025 ರಂದು ವಿ.ನಾಗೇನಹಳ್ಳಿ ಪಿಳೆಕಮ್ಮ ದೇವಸ್ಥಾನ ಮುಂಭಾಗದ ಖಾಲಿ ಜಾಗದಲ್ಲಿದ್ದ 04 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.ಈ ಆರೋಪಿಯ ಬಂಧನದಿಂದ 1) ಹೆಬ್ಬಾಳ ಪೊಲೀಸ್ ಠಾಣೆಯ 01 ಸರ ಅಪಹರಣ ಪ್ರಕರಣ ಮತ್ತು 01 ದ್ವಿ-ಚಕ್ರ ವಾಹನ ಕಳವು ಪ್ರಕರಣ 2) ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯ- 01 ದ್ವಿ-ಚಕ್ರವಾಹನ ಕಳವು ಪ್ರಕರಣ 3) ರಾಜಗೋಪಾಲ ನಗರ ಪೊಲೀಸ್ ಠಾಣೆಯ-01 ದ್ವಿ-ಚಕ್ರವಾಹನ ಕಳವು ಪ್ರಕರಣ 4) ಮೈಕೊ ಲೇಔಟ್ ಪೊಲೀಸ್ ಠಾಣೆಯ-01 ದ್ವಿ-ಚಕ್ರವಾಹನ ಕಳವು ಪ್ರಕರಣ ಸೇರಿದಂತೆ 04 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಮತ್ತು 01 ಸರ ಅಪಹರಣ ಪ್ರರಕಣ ಪತ್ತೆಯಾಗಿರುತ್ತವೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ.ಈ ಪ್ರಕರಣದಲ್ಲಿ ಆರೋಪಿಯ ಬಂಧನದಿಂದ ಒಟ್ಟು 04 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ * 2,00,000/- (ಎರಡು ಲಕ್ಷ ರೂಪಾಯಿ)ಆರೋಪಿಯನ್ನು ದಿನಾಂಕ:31/10/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿರುತ್ತದೆ.

ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ. 2 ದ್ವಿ-ಚಕ್ರ ವಾಹನಗಳ ವಶ ಮೌಲ್ಯ 1.5 ಲಕ್ಷ.ಹೆಬ್ಬಾಳ ಪೊಲೀಸ್ ಠಾಣಾ ಸರಹದ್ದಿನ ಸಾಧರಹಳ್ಳಿ ಬಯ್ಯಣ್ಣ ಲೇಔಟ್‌ನಲ್ಲಿ ವಾಸವಿರುವ ಪಿರ್ಯಾದುದಾರರು ದಿನಾಂಕ:16/10/2025 ರಂದು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರ್ಯಾದುದಾರರು ದಿನಾಂಕ:13.10.2025 ರಂದು ರಾತ್ರಿ ತಮ್ಮ ದ್ವಿ-ಚಕ್ರವಾಹನವನ್ನು ಮನೆಯ ಮುಂಭಾಗದಲ್ಲಿ ನಿಲ್ಲಿಸಿರುತ್ತಾರೆ. ಮರುದಿನ ದಿನಾಂಕ:14.10.2025 ರಂದು ಬೆಳಿಗ್ಗೆ ಬಂದು ನೋಡಲಾಗಿ ಯಾರೋ ಅಪರಿಚಿತ ವ್ಯಕ್ತಿಗಳು ದ್ವಿ-ಚಕ್ರವಾಹನವನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:27/10/2025 ರಂದು ಲಗ್ಗೆರೆ ಬ್ರಿಡ್ಜ್ ಬಳಿ ಓರ್ವ ವ್ಯಕ್ತಿಯನ್ನು ಹಾಗೂ ಪ್ರಕರಣದಲ್ಲಿ ಕಳುವಾಗಿದ್ದ 01 ದ್ವಿ-ಚಕ್ರವಾಹನದ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ದ್ವಿ-ಚಕ್ರವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಅಲ್ಲದೆ, ರಾಜಾಜಿನಗರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಮತ್ತೊಂದು ದ್ವಿ-ಚಕ್ರ ವಾಹನ ಕಳವು ಮಾಡಿರುವುದಾಗಿ ಹಾಗೂ ಕಳವು ಮಾಡಿರುವ ದ್ವಿ-ಚಕ್ರ ವಾಹನವನ್ನು ಆತನ ಪರಿಚಯಸ್ಥನಿಗೆ ನೀಡಿರುವುದಾಗಿ ತಿಳಿಸಿರುತ್ತಾನೆ.ಆರೋಪಿಯು ನೀಡಿದ ಮಾಹಿತಿ ಮೇರೆಗೆ ದಿನಾಂಕ:28/10/2025 ರಂದು ಆತನ ಪರಿಚಯಸ್ಥನಿಗೆ ನೀಡಿದ 01 ದ್ವಿ-ಚಕ್ರವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ.ಈ ಪ್ರಕರಣದ ಆರೋಪಿಯ ಬಂಧನದಿಂದ ಒಟ್ಟು 02 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.ಇವುಗಳ ಒಟ್ಟು ಮೌಲ್ಯ * 1,50,000/- (ಒಂದು ಲಕ್ಷದ ಐವತ್ತು ಸಾವಿರ).ದಿನಾಂಕ:28.10.2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೊಪ್ಪಿಸಿರುತ್ತದೆ. ಸದರಿ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯು ತಲೆಮರೆಸಿಕೊಂಡಿದ್ದು, ಪತ್ತೆಕಾರ್ಯ ಮುಂದುವರೆದಿರುತ್ತದೆ. ತನಿಖೆ ಪ್ರಗತಿಯಲ್ಲಿದೆ.ಈ ಕಾರ್ಯಚಾರಣೆಯನ್ನು ಶ್ರೀ ಬಿ.ಎಸ್. ನೇಮಗೌಡ, ಐ.ಪಿ.ಎಸ್. ಉಪ-ಪೊಲೀಸ್ ಆಯುಕ್ತರು ಉತ್ತರ ವಿಭಾಗ ಬೆಂಗಳೂರು ನಗರ ಮಾರ್ಗದರ್ಶನದಲ್ಲಿ, ಶ್ರೀ ತಸ್ವೀರ್.ಕೆ.ಎಸ್. ಸಹಾಯಕ ಪೊಲೀಸ್ ಆಯುಕ್ತರು. ಜೆ.ಸಿ.ನಗರ ಉಪ-ವಿಭಾಗರವರುಗಳ ನೇತೃತ್ವದಲ್ಲಿ, ಹೆಬ್ಬಾಳ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಶ್ರೀ. ಭೈರರವರ ರವರ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣಗಳನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

Related Articles

Leave a Reply

Your email address will not be published. Required fields are marked *

Back to top button